21ನೆಯ ತಾಲೂಕು ಸಾಹಿತ್ಯ ಸಮ್ಮೇಳನದ ಸಮ್ಮೇಳನ ಅಧ್ಯಕ್ಷರಿಗೆ ಅಧಿಕೃತ ಆಹ್ವಾನ
ಕುಂದಾಪುರ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕದ 21ನೇ ಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಡಾ.ಎನ್.ಆರ್.ಭಾಸ್ಕರ್ ಆಚಾರ್ಯ ಅವರಿಗೆ ಅಧಿಕೃತವಾಗಿ ಆಹ್ವಾನ ಪತ್ರಿಕೆಯನ್ನು ನೀಡಲಾಯಿತು.
ಆಹ್ವಾನ ಪತ್ರಿಕೆ ನೀಡಿದ ತಾಲೂಕು ಘಟಕದ ಅಧ್ಯಕ್ಷ ಡಾ. ಉಮೇಶ್ ಪುತ್ರನ್ ಮತ್ತು ಸ್ವಾಗತ ಸಮಿತಿ ಅಧ್ಯಕ್ಷ ಗಜೇಂದ್ರ ಶೆಟ್ಟಿ ಅವರು ವಿದ್ಯುಕ್ತವಾಗಿ ಆಹ್ವಾನ ನೀಡಿ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿಕೊಡಲು ಕೋರಿದರು.
ಈ ಸಂದರ್ಭ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಶುಭ ಹಾರೈಸಿದರು. ಕಾರ್ಯದರ್ಶಿ ದಿನಕರ್ ಆರ್ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಸುಬ್ರಮಣ್ಯ ಶೆಟ್ಟಿ ವಂದಿಸಿದರು.





