ಕಾಳಾವರ ಶಾಲೆಯಲ್ಲಿ ಸಂಭ್ರಮದ ವಾರ್ಷಿಕ ಕ್ರೀಡಾಕೂಟ

ಕೋಟೇಶ್ವರ: ಕ್ರೀಡೆಗಳು ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೂರಕವಾಗಿದ್ದು ಕ್ರೀಡಾಸ್ಫೂರ್ತಿ ಮತ್ತು ಶಿಸ್ತು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಶ್ರೀ ಕಾಳಿಂಗ ಸುಬ್ರಹ್ಮಣ್ಯ ಹಾಗೂ ಮಹಾಲಿಂಗೇಶ್ವರ ದೇವಸ್ಥಾನ ಕಾಳಾವರ ಇದರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಾನಾಡಿ ಚಂದ್ರಶೇಖರ ಹೆಗ್ಡೆ ಹೇಳಿದರು.

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಳಾವರದಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ದೀಪಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘ ಹಾಗೂ ನೇತಾಜಿ ಯುವಕ ಮಂಡಲದ ಅಧ್ಯಕ್ಷ ಭರತ್ ಕುಮಾರ್ ಶೆಟ್ಟಿ ಮಕ್ಕಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಜಯಪ್ರಕಾಶ್ ಶೆಟ್ಟಿ, ಎಸ್‌ಡಿಎಂಸಿ ಉಪಾಧ್ಯಕ್ಷ ಶ್ರೀಧರ್ ಕುಲಾಲ್ ಉಪಸ್ಥಿತರಿದ್ದರು. ಉದಯ್ ಕುಮಾರ್ ಶೆಟ್ಟಿ ಆನಗಳ್ಳಿ ಮನೆ ಸಳ್ವಾಡಿ ಹಾಗೂ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಭರತ್ ಕುಮಾರ್ ಶೆಟ್ಟಿ ಇವರು ಬಹುಮಾನದ ಪ್ರಾಯೋಜಕತ್ವವನ್ನು ವಹಿಸಿದ್ದರು.

ಶಾಲೆಯ ಮುಖ್ಯ ಶಿಕ್ಷಕಿ ವಸಂತಿ ಎಚ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವಕ್ವಾಡಿ ಬಾಲಕೃಷ್ಣ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಸಹಶಿಕ್ಷಕ ಉಳ್ತೂರು ಉದಯ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಜಿಪಿಟಿ ಶಿಕ್ಷಕಿ ಶ್ರೀಮತಿ ರಜನಿಯವರು ವಂದಿಸಿದರು.ಸಹಶಿಕ್ಷಕಿಯರಾದ ಭಾರತಿ ಕಲ್ಕೂರ, ನಾಗರತ್ನ, ಶೈಲಜಾ ಶ್ರುತಿ, ಪೂರ್ಣಿಮಾ, ಸುಮಿತ್ರ ಹಾಗೂ ಎಲ್‌ಕೆಜಿ ಮತ್ತು ಯುಕೆಜಿ ಶಿಕ್ಷಕಿ ಶ್ರುತಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.