ಕುಂಭಾಸಿ: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ, ರೋಟರಿ ಸಮುದಾಯ ದಳ ಕೋಟೇಶ್ವರ ಇವರ ಸಹಭಾಗಿತ್ವದಲ್ಲಿ 321ನೇ ಪರಿಸರಸ್ನೇಹಿ ಭಾನುವಾರದ ಪ್ರಯುಕ್ತ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಜರುಗಿತು.

ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಶ್ರೀರಮಣ ಉಪಾಧ್ಯಾಯ ಅವರು ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ದೇವಳದ ವತಿಯಿಂದ ದೇಗುಲದ ವ್ಯವಸ್ಥಾಪಕ ನಟೇಶ್ ಕಾರಂತ ಅವರು ಸ್ವಚ್ಛತಾ ಕಾರ್ಯದ ಅಂಗವಾಗಿ ಸ್ವಚ್ಛಾಗ್ರಹಿ ಪಂಚವರ್ಣ ಸಂಘಟನೆಯ ಲಲಿತಾ ಪೂಜಾರಿ ಹಾಗೂ ರೋಟರಿ ಸಮುದಾಯ ದಳದ ಪರವಾಗಿ ಸುಪ್ರಿತಾ ಪುರಾಣಿಕ್ ಅವರನ್ನು ಗುರುತಿಸಿ ಗೌರವಿಸಲಾಯಿತು.

ಪಂಚವರ್ಣ ಸಂಘಟನೆಯ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ರೋಟರಿ ಸಮುದಾಯ ದಳದ ಪ್ರಮುಖರು ಉಪಸ್ಥಿತರಿದ್ದರು.