ತೆಕ್ಕಟ್ಟೆ: ಉಡುಪಿ ಜಿಲ್ಲಾ ಮಟ್ಟದ ವಿಶೇಷ ಚೇತನ ಮಕ್ಕಳ 14ರ ವಯೋಮಾನ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಕೆದೂರಿನ 8ನೇ ತರಗತಿಯ ರಶಿಕ್ ಬಾಲಕರ ಜಾವಲಿನ್ ಥ್ರೋ ಪಂದ್ಯಾಟದಲ್ಲಿ ಪ್ರಥಮ ಹಾಗೂ ಗುಂಡೆಸೆತದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಪ್ರಶಸ್ತಿ ವಿಜೇತ ವಿದ್ಯಾರ್ಥಿಯನ್ನು ಮತ್ತು ತರಬೇತುಗೊಳಿಸಿದ ದೈಹಿಕ ಶಿಕ್ಷಣ ಶಿಕ್ಷಕಿ ರತ್ನಾ ಅವರನ್ನು ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಮತ್ತು ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು ಅಭಿನಂದಿಸಿದ್ದಾರೆ.





